
ವಸತಿಯೋಜನೆಯಲ್ಲಿ ಲಂಚ ನೀಡಿದವರಿಗೆ ಮಾತ್ರ ಮನೆ ನೀಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಮಾಡಿರುವ ಆರೋಪಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದಾಋೆ. ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ವಾಸ್ತವಾಂಶ ತಿಳಿಯದೆ ಟೀಕಿಸುವುದು ಪ್ರತಿಪಕ್ಷಗಳಿಗೆ ಶೋಭೆಯಲ್ಲ.
ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದರು.
ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ. 15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ಜಮೀರ್ ಅಹ್ಮದ್ ತಿಳಿಸಿದ್ದಾರೆ.
2019 ರಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ. 10 ರಷ್ಟು ಮೀಸಲಾತಿ ಪ್ರಮಾಣ ಶೇ. 15 ಕ್ಕೆ ಹೆಚ್ಚಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು. 2021 ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗವು ಸಹ ಶೇ. 15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತು ಎಂದು ಜಮೀರ್ ಸ್ಪಷ್ಟನೆ ನೀಡಿದ್ದಾರೆ






