ವಿ ಶಾಖಪಟ್ಟಣ : ಯೋಗವು ಕೇವಲ ವ್ಯಾಯಾಮವಲ್ಲ ಜೀವನ ಶೈಲಿಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವಿಶ್ವಾದ್ಯಂತ ಇಂದು ಯೋಗದಿನ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶಾಖ ಪಟ್ಟಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದು ಇಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂತೋಷವಾಗಿದೆ. ಯೋಗಾಭ್ಯಾಸದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸುಧೃಡವಾಗಿರಿಸಿಕೊಳ್ಳಬಹುದು ಎಂದು ನರೇಂದ್ರ ಮೋದಿ ಹೇಳಿದರು.

ಇಂದು ವಿಶಾಖಪಟ್ಟಣದಲ್ಲಿ ಏಕಕಾಲದಲ್ಲಿ 5 ಲಕ್ಷ ಮಂದಿ ಯೋಗಾಭ್ಯಾಸ ಮಾಡುತ್ತಿದ್ದು, ಇದು ವಿಶೇಷವಾದ ದಾಖಲೆ ಬರೆಯಲಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!