
ಕಾಂಟ್ರವರ್ಸಿ ಹೇಳಿಕೆಗಳ ಮೂಲಕ ಕರಾವಳಿ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರೋ ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ.
ಶ್ರೀಕಾಂತ್ ಶೆಟ್ಟಿ ಅವಯರಿಗೆ ಮೂರು ತಿಂಗಳು ಬಾಗಲಕೋಟೆ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಭಾಷಣದ ಮೂಲಕ ಕೋಮು ಸಾಮರಸ್ಯ ಕದಡುವ ಸಾಧ್ಯತೆ ಇರುವ ಕಾರಣ ನೀಡಿ ಜಿಲ್ಲಾಡಳಿತ ಶ್ರೀಕಾಂತ ಶೆಟ್ಟಿ ಅವರಿಗೆ 3 ತಿಂಗಳು ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಪ್ರಕಟಿಸಿದೆ.
ಇವತ್ತು ಬಾಗಲಕೋಟೆ ಶ್ರೀ ಛತ್ರಪತಿ ಶಿವಾಜಿ ಕಂಚಿನ ಮೂರ್ತಿ ಉದ್ಘಾಟನಾ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮ ಮುಖ್ಯ ಭಾಷಣಕಾರರಾಗಿ ಶ್ರೀಕಾಂತ ಶೆಟ್ಟಿ ಅವರನ್ನು ಆಹ್ವಾನಿಸಲಾಗಿತ್ತು.ಆದ್ರೆ ಕಾರ್ಯಕ್ರಮಕ್ಕೂ ಮುನ್ನವೇ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.






