ಇ ರಾನ್ ನ ಮೂರು ಪರಮಾಣು ತಾಣಗಳಾದ ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ಬೆನ್ನಲ್ಲೇ ಇರಾನ್ ಪ್ರತಿಕ್ರಿಯೆ ನೀಡಿದೆ.

ಅಮೆರಿಕದ ದಾಳಿ ಖಂಡಿಸಿದ ಇರಾನ್, ನಮ್ಮ 3 ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಇಂತಹ ದಾಳಿಗಳು ಅಂತಾರಾಷ್ಟ್ರೀಯ ಶಾಂತಿಗೆ ಅಪಾಯಕಾರಿ ಎಂದು ಅಮೆರಿಕ ಸೇನೆ ದಾಳಿ ಬಳಿಕ ಇರಾನ್ ಪ್ರತಿಕ್ರಿಯೆ ನೀಡಿದೆ.

ಇರಾನ್‌ನ ಫೋರ್ಡೊ, ನತಾನ್ಜ್ ಮತ್ತು ಎಸ್ಪಹಾನ್ ಅಣು ಕೇಂದ್ರಗಳಲ್ಲಿ ದಾಳಿ ನಡೆಸಲಾಗಿದೆ. ಎಲ್ಲ ವಿಮಾನಗಳು ಇರಾನ್ ವಾಯುಪ್ರದೇಶದಿಂದ ಸುರಕ್ಷಿತವಾಗಿ ಹೊರಗೆ ಬಂದಿವೆ. ಪ್ರಾಥಮಿಕ ಅಣು ಕೇಂದ್ರವಾದ ಫೋರ್ಡೊದಲ್ಲಿ ಪೂರ್ಣ ಪ್ರಮಾಣದ ಪೇಲೋಡ್ ಹೊಂದಿದ ಬಾಂಬ್ ದಾಳಿ ನಡೆಸಲಾಯಿತು’ ಎಂದು ಅವರು ಹೇಳಿದ್ದಾರೆ.

‘ಎಲ್ಲ ಯುದ್ಧ ವಿಮಾನಗಳು ಸುರಕ್ಷಿತವಾಗಿ ಹಿಂತಿರುಗುತ್ತಿವೆ. ಮಹಾನ್ ಅಮೆರಿಕದ ಯೋಧರಿಗೆ ಅಭಿನಂದನೆಗಳು. ಜಗತ್ತಿನ ಬೇರೆ ಯಾವುದೇ ಸೈನ್ಯಕ್ಕೆ ಇಂತಹ ಕಾರ್ಯಾಚರಣೆ ನಡೆಸಲು ಸಾಧ್ಯವಿಲ್ಲ. ಈಗ ಶಾಂತಿಯ ಸಮಯ!’ ಎಂದು ಹೇಳಿದ್ದಾರೆ.

ಮಗದೊಂದು ಪೋಸ್ಟ್‌ನಲ್ಲಿ ಇರಾನ್ ಅಣು ಕೇಂದ್ರಗಳನ್ನು ಗುರಿಯಾಗಿಸಿ ಅಮೆರಿಕ ನಡೆಸಿರುವ ಕಾರ್ಯಾಚರಣೆ ಕುರಿತು ಶ್ವೇತಭವನದಲ್ಲಿ ಮಾತನಾಡುವುದಾಗಿ ಟ್ರಂಪ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!