
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪಕ್ಕದ ದರೆಗೆ ಗುದ್ದಿ ನಿಂತ ಘಟನೆ ಅಡ್ಯನಡ್ಕ ಬಳಿ ಜೂ.22ರ ರವಿವಾರ ಸಂಭವಿಸಿದೆ.
ಘಟನೆ ಪರಿಣಾಮ ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯಗಳಾಗಿದೆ.
ಅವರನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವ ಮಣಿಯಾಣಿ ಅವರು ಸ್ಥಳೀಯರ ಸಹಕಾರದೊಂದಿಗೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.






