ತಮಿಳು, ಕನ್ನಡ ಭಾಷೆಗಳಷ್ಟೇ ಪ್ರಾಚೀನವಾದ ಭಾಷೆ ತುಳು (Tulu Language). ಅವಿಭಜಿತ ದಕ್ಷಿಣಕನ್ನಡ, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಚಾಲ್ತಿಯಲ್ಲಿರುವ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕೆಂಬ ಆಗ್ರಹ, ಹೋರಾಟ ದಶಕಗಳದ್ದು.

ಆದರೆ ಇದೀಗ ತುಳು ಭಾಷೆ ಬಳಕೆ ಮಾಡಬಾರದು (Tulu Language Ban) ಎನ್ನುವ ಸರ್ಕಾರಿ ಆದೇಶ ಕರಾವಳಿಯಲ್ಲಿ (Coastal Karnataka) ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಗಳಲ್ಲಿ ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವ ಬಗ್ಗೆ ಆದೇಶವೊಂದನ್ನು ಹೊರಡಿಸಲಾಗಿದೆ.

ವಿವಾದದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ: ಸುತ್ತೋಲೆ ವಾಪಸ್

ಈ ಬೆಳವಣಿಗೆ ವಿವಾದಕ್ಕೀಡಾದ ಬೆನ್ನಲ್ಲೇ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ರನ್ನು ತುಳು ಸಂಘಟನೆಗಳ ಪ್ರಮುಖರು ಭೇಟಿಯಾಗಿದ್ದಾರೆ. ಈ ಸುತ್ತೋಲೆಯನ್ನು ವಾಪಾಸ್ ಪಡೆಯಬೇಕಂದು ಆಗ್ರಹಿಸಿದ್ದಾರೆ. ಭಾರೀ ವಿವಾದದ ಬಳಿಕ ಎಚ್ಚೆತ್ತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಈ ಸುತ್ತೋಲೆಯನ್ನು ವಾಪಾಸ್ ಪಡೆದಿದೆ.

ಆದೇಶ ಹೊರಡಿಸಿದ ಅಧಿಕಾರಿಯ ಅಮಾನತಿಗೆ ಆಗ್ರಹ

ತುಳು ಸಂಘಟನೆಗಳ ಆಗ್ರಹಕ್ಕೆ ಮಣಿದ ಅಧಿಕಾರಿಗಳು ತುಳು ಭಾಷೆ ಬಳಕೆ ನಿಷೇಧದ ಆದೇಶ ನೀಡಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಹೋರಾಟಗಾರರು, ಆ ಆದೇಶ ಹೊರಡಿಸಿದ ಅಧಿಕಾರಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ. ತುಳು ಭಾಷೆಯ ವಿರುದ್ಧ ಅವಹೇಳನ ಮಾಡಿದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!