
ಮಂಗಳೂರು :ತ್ರಿಶಾ ಸಮೂಹ ಸಂಸ್ಥೆ ಮಂಗಳೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯಶಸ್ವಿನಿ ಯಶಪಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯೋಗದ ಮಹತ್ವವನ್ನು ತಿಳಿಸಿದರು. ಪ್ರಾಚೀನ ಭಾರತೀಯ ಪರಂಪರೆಯ ಕೊಡುಗೆಯಾಗಿರುವ ಯೋಗವು ಮನುಷ್ಯನನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿಸಲು ಸಹಾಯಕವಾಗುತ್ತದೆ ಎಂದರು. ವಿದ್ಯಾರ್ಥಿಗಳು ಯೋಗಾಸನವನ್ನು ಮಾಡುವುದರ ಮೂಲಕ ಯೋಗ ದಿನಾಚರಣೆಯನ್ನು ಆಚರಿಸಿದರು.
ಕಾರ್ಯಕ್ರಮದಲ್ಲಿ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜ್‌ಮೆಂಟ್‌ನ ಪ್ರಾಂಶುಪಾಲರಾದ ಮಂಜುನಾಥ ಕಾಮತ್ ಎಮ್, ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಸುಪ್ರಭಾ ಎಮ್ ಮತ್ತು ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಪೊನ್ನಣ್ಣ ಸಿ ಪಿ ಹಾಗೂ ಬೋಧಕ, ಭೋಧಕೆತರ ಸಿಬ್ಬಂದಿಗಳು ಉಪಸ್ಥಿತರಿದ್ದರು.






