ಮುಂಗಾರು ಮಳೆ ಆರಂಭವಾಗಿದ್ದು, ಎಲ್ಲೆಲ್ಲೂ ಮಳೆಯ ಅಬ್ಬರವಿದೆ. ಆರಂಭದಲ್ಲಿಯೇ ರಾಜ್ಯದ ಜಲಾಶಯಗಳು ಭರ್ತಿಯಾಗಿವೆ‌. ಹವಮಾನ ವರದಿ ನೀಡಿರುವ ವರದಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಜೋರು ಮಳೆಯಾಗಲಿದೆ ಎನ್ನಲಾಗಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಜೂನ್ 23ರಿಂದ ಸಾಧಾರಣ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಕ್ಕೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಜೋರು ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ.

ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ದಾವಣಗೆರೆ, ಧಾರವಾಡ, ಶಿವಮೊಗ್ಗ, ಕೋಲಾರ, ಬಳ್ಳಾರಿ, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೀದರ್, ಯಾದಗಿರಿ, ಕಲಬುರಗಿ ಸೇರಿದಂತೆ ಹಲವು ಭಾಗದಲ್ಲಿ ಬೆಳಗ್ಗೆಯಿಂದ ಕೊಂಚ ಬಿಸಿಲು ಕಾಣಿಸಿಕೊಂಡಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಉಷ್ಣಾಂಶವನ್ನು ನೋಡುವುದಾದರೆ, ಚಿತ್ರುದುರ್ಗದಲ್ಲಿ ತಲಾ 32ಡಿಗ್ರಿ ಸೆಲ್ಸಿಯಸ್ ತಾಪಮಾನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ 30 ಡಿಗ್ರಿ ಸೆಲ್ಸಿಯಸ್, ಮೈಸೂರು 30 ಡಿಗ್ರಿ ಸೆಲ್ಸಿಯಸ್, ಗದಗ 30 ಮತ್ತು ಹಾವೇರಿ ಭಾಗದಲ್ಲಿ 30 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಸದ್ಯಕ್ಕೆ ಕರಾವಳಿ ಭಾಗದಲ್ಲಿ ಬಿಟ್ಟರೆ ಉಳಿದ ಭಾಗದಲ್ಲಿ ಜೋರು ಮಳೆಯ ಸೂಚನೆಯನ್ನೇನು ನೀಡಿಲ್ಲ.

Leave a Reply

Your email address will not be published. Required fields are marked *

Join WhatsApp Group
error: Content is protected !!