ಸ್ವಾಮೀಜಿಯೊಬ್ಬರು ಮಹಿಳೆಮಗಳೊಂದಿಗೆ ಮಠದ ರೂಮ್ ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಇಲ್ಲಿನ ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿ ವಿರುದ್ಧ ಅಕ್ರಮ ಸಂಭಂದ ಆರೋಪ ಕೇಳಿಬಂದಿತ್ತು.

ಇದೀಗ ಸ್ವಾಮೀಜಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮಸ್ಥರು ಸ್ವಾಮೀಜಿಯನ್ನು ಮಠದಿಂದ ಹೊರ ಹಾಕಿದ್ದಾರೆ.

ಬಿಜಾಪುರ ಜಿಲ್ಲೆಯ ತಾಳಿಕೋಟೆ ಮೂಲದ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದ್ದರು. ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಯನ್ನ ಹಾಗೂ ಮಹಿಳೆಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ರಾತ್ರಿ ವೇಳೆ ಮಠದಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ತಮ್ಮ ಕೊಠಡಿಯೊಳಗೆ ಇರುವುದು ಯಾಕೆ? ಎಂದು ಸ್ವಾಮೀಜಿಯನ್ನ ಸ್ಥಳೀಯರು ಪ್ರಶ್ನಿಸಿದ್ದಾರೆ. ಇದಕ್ಕೆ ಸ್ವಾಮೀಜಿ ರಾತ್ರಿಯಾಗಿರುವುದರಿಂದ ಊರಿಗೆ ಹೋಗಲು ಸಾಧ್ಯವಾಗದೇ ಇಲ್ಲೇ ಉಳಿದುಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮನವರಿಕೆ ಮಾಡಲು ಯತ್ನಿಸಿದ್ದಾರೆ, ಆದರೆ ಸ್ವಾಮೀಜಿ ಮಾತನು ಗ್ರಾಮಸ್ಥರು ಒಪ್ಪಿಲ್ಲ. ಪೊಲೀಸರುಗೆ ದೂರು ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆ ಮತ್ತು ಆಕೆಯ ಮಗಳನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ. ಸ್ವಾಮೀಜಿಯನ್ನು ಗ್ರಾಮಸ್ಥರ ಒತ್ತಾಯದ ಮೇರೆಗೆ ಮಠದಿಂದ ಹೊರ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!