ಉತ್ತರ ಕನ್ನಡದಲ್ಲಿ ವಿಪರೀತ ಮಳೆಯಾಗ್ತಿದ್ದು, ವಾಹನಗಳ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗ್ತಿದೆ. ಇದೀಗ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದ ಖಾಸಗಿ ಬಸ್ನಲ್ಲಿದ್ದ ಸುಮಾರು 25 ಪ್ರಯಾಣಿಕರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಯಲ್ಲಾಪುರ ತಾಲೂಕಿನ ಅರಬೈಲು ಘಟ್ಟದಲ್ಲಿ ಇಂದು ಬೆಳಗ್ಗೆ ನಡೆದಿದೆ.ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು. ಅಪಘಾತದ ರಭಸಕ್ಕೆ ಎರಡೂ ವಾಹನಗಳು ಪ್ರಪಾತಕ್ಕೆ ಬೀಳುವ ಹಂತ ತಲುಪಿದ್ದವು. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಾರಿ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!