ಸುಳ್ಯ:: ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ಎರಡು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.

ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್’ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಗೊಂಡ ಬಸ್ ಗಳ ಪೈಕಿ ಒಂದು ಅಶ್ವಮೇಧ ಬಸ್ ಎಂದು ಹೇಳಲಾಗಿದೆ.

ಸುಳ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಪತ್ರಿಕಾ ಪ್ರಕಟಣೆ:

ದಿನಾಂಕ 25.06.2025 ರಂದು ಸಂಜೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಆರಂತೋಡು ಗ್ರಾಮದ ಕೋಡಂಕೇರಿ ಎಂಬಲ್ಲಿ, ಸುಳ್ಯದಿಂದ  ಮಡಿಕೇರಿ ಕಡೆಗೆ ಹೋಗುತ್ತಿದ್ದ KA 21 F 0069 ನೋಂದಣಿ ಸಂಖ್ಯೆಯ ಕೆ.ಎಸ್.ಆರ್.ಟಿ.ಸಿ  ಬಸ್ ಗೆ, ಮಡಿಕೇರಿ ಕಡೆಯಿಂದ  – ಸುಳ್ಯ ಮಾರ್ಗವಾಗಿ ಬರುತ್ತಿದ್ದ KA 19 F 3620 ನೊಂದಣಿ ಸಂಖ್ಯೆಯ ಕೆ.ಎಸ್.ಆರ್.ಟಿ.ಸಿ  ಬಸ್  ಚಾಲಕನ ನಿರ್ಲಕ್ಷ್ಯತನದ ಚಾಲನೆಯಿಂದಾಗಿ ಅಪಘಾತವಾಗಿರುತ್ತದೆ. ಅಪಘಾತದಲ್ಲಿ ಮಡಿಕೇರಿ ಕುಶಾಲನಗರ ಮೂಲದ ಭಾರತಿ (50) ಎಂಬವರು  ಸ್ಥಳದಲ್ಲೇ ಮೃತಪಟ್ಟಿದ್ದು, 02 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುತ್ತದೆ. ಪ್ರಯಾಣಿಕರ ಪೈಕಿ 17 ಜನರಿಗೆ ಸಾಮಾನ್ಯ ಗಾಯಗಳಾಗಿದ್ದು, ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿರುತ್ತದೆ. ಘಟನಾ ಸ್ಥಳಕ್ಕೆ ಸುಳ್ಯ ವೃತ್ತ ನಿರೀಕ್ಷಕರು ಹಾಗೂ ಉಪನಿರೀಕ್ಷಕರು ಭೇಟಿ ನೀಡಿದ್ದು, ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು. ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿರುತ್ತದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!