ಪಕ್ಷದಿಂದ (Party) ಉಚ್ಚಾಟನೆಗೊಂಡಿರುವ ಕೆ.ಎಸ್‌.ಈಶ್ವರಪ್ಪ (L S Eshwarappa) ಹಾಗೂ ಬಸನಗೌಡ ಪಾಟೀಲ ಯತ್ನಾಳ್‌ (Basavana Gowda Patil) ಅವರನ್ನ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ (Radhamohan Das) ಖಡಕ್‌ ಆಗಿ ಹೇಳಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ
ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಬ್ಬರೂ ನಾಯಕರು ಮತ್ತೆ ಬಿಜೆಪಿಗೆ ಸೇರ್ಪಡೆ ಆಗುವ ಮಾತಿಲ್ಲ. ಅವರಿಬ್ಬರೂ ನಮ್ಮ ಪಕ್ಷದಲ್ಲಿ ಇಲ್ಲ. ಅವರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಪಕ್ಷದ ಹಿತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದು ಅವರನ್ನ ನಾವೇಕೆ ಆಹ್ವಾನಿಸಬೇಕು? ನಮ್ಮ ಪಕ್ಷ ತುಂಬಾ ದೊಡ್ಡದು ಎಂದಿದಾರೆ.

ಇನ್ನು ನಮ್ಮ ಪಕ್ಷ ಯಾವಾಗಲೂ ಸಿದ್ಧಾಂತದ ಆಧಾರದ ಮೇಲೆ ನಡೆಯುತ್ತದೆ. ನಾಯಕರ ಆಧಾರದ ಮೇಲೆ ನಡೆಯುವುದಿಲ್ಲ. ಹಾಗಾಗಿ ನನಗೆ ಈಗಿರುವ ಇರುವ ಮಾಹಿತಿ ಪ್ರಕಾರ ಅವರನ್ನ ಪಕ್ಷಕ್ಕೆ ಆಹ್ವಾನಿಸುವ ಯಾವುದೇ ಆಲೋಚನೆ ಇಲ್ಲ ಎಂದಿದ್ದಾರೆ.

ವಿಜಯೇಂದ್ರ ಸ್ಥಾನಕ್ಕೆ ಕಂಟಕ
ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರೇ ಮುಂದುವರಿಯುತ್ತಾರಾ ಇಲ್ಲವೋ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಪ್ರಶ್ನೆಗೆ ನಾನು ಉತ್ತರ ನೀಡಲು ಸಾಧ್ಯವಾಗುವುದಿಲ್ಲ. ಈ ಅಧ್ಯಕ್ಷ ಸ್ಥಾನಕ್ಕೆ ಪ್ರಕ್ರಿಯೆಯನ್ನ ಪಕ್ಷದ ಸಂಸದೀಯ ಮಂಡಳಿ ಮಾಡುತ್ತದೆ. ಇದರ ಬಗ್ಗೆ ಮಾತನಾಡುವ ಅಧಿಕಾರ ನನಗಿಲ್ಲ ಎಂದಿದ್ದಾರೆ.

ರಾಜ್ಯ ಸರ್ಕಾರದ ಬಗ್ಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಭ್ರಷಾಚಾರದ ವಿಷಯದಲ್ಲಿ ಪೈಪೋಟಿ ನಡೆಯುತ್ತಿದೆ. ರಾಜ್ಯದಲ್ಲಿ ಏನಾಗುತ್ತಿದೆ ಎಂಬುದನ್ನ ಜನ ನೋಡುತ್ತಿದ್ಧಾರೆ. ನಮಗೆ ಸರ್ಕಾರವನ್ನ ಬೀಳಿಸುವುದರಲ್ಲಿ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!