ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಈವರೆಗೂ ಒಟ್ಟು 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ತನ್ನ ಹಸುವನ್ನು ಹುಲಿ ಕೊಂದಿದ್ದಕ್ಕೆ ಪ್ರತೀಕಾರವಾಗಿ ವಿಷ ಹಾಕಿದ್ದಾಗಿ ವಿಚಾರಣೆ ವೇಳೆ ಮಾದರಾಜು ಒಪ್ಪಿಕೊಂಡಿದ್ದಾನೆ

ಸದ್ಯ ಪೊಲೀಸರು ಆರೋಪಿಗಳನ್ನು ದೃಢಪಡಿಸಿದ್ದಾರೆ. ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಮಾದ ಅಲಿಯಾಸ್ ಮಾದುರಾಜು ನಾಗರಾಜ್ ಹಾಗು ಇದೀಗ ಕೋನಪ್ಪ ಎಂಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತನ್ನ ಹಸುವನ್ನ ಕೊಂದಿದ್ದಕ್ಕೆ ವಿಷ ಹಾಕಿರುವುದಾಗಿ ಮಾದ ತಪ್ಪೊಪ್ಪಿಗೆ ನೀಡಿದ್ದಾರೆ.ಸದ್ಯ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗಳಿಂದ ವಿಚಾರಣೆ ನಡೆದಿದೆ.

ತನ್ನ ಹಸುವನ್ನು ಹುಲಿ ಕೊಂದಿದ್ದಕ್ಕೆ ತಾನೇ ವಿಷ ಹಾಕಿ ಹುಲಿಯನ್ನು ಕೊಂದಿರುವುದಾಗಿ ಮಾದನ ತಂದೆ ಶಿವಣ್ಣ ಹೇಳಿಕೆ ನೀಡಿದ್ದರು. ಪುತ್ರನನ್ನು ರಕ್ಷಿಸುವ ಸಲುವಾಗಿ ತಾನು ಹುಲಿ ಸಾಯಿಸಿದ್ದಾಗಿ ಹೇಳಿದ್ದರು. ಆದರೆ ಅನುಮಾನಗೊಂಡು ತೀವ್ರ ವಿಚಾರಣೆ ನಡೆಸಿದಾಗ ಶಿವಣ್ಣನ ಪುತ್ರ ಮಾದ ಅಲಿಯಾಸ್ ಮಾದುರಾಜು ಐದು ಹುಲಿಗಳ ಸಾವಿಗೆ ತಾನು ಕಾರಣ. ತಾನೇ ವಿಷಹಾಕಿ ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ

Leave a Reply

Your email address will not be published. Required fields are marked *

Join WhatsApp Group
error: Content is protected !!