ಕೋಲ್ಕತ್ತಾದಲ್ಲಿ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ವಿಚಿತ್ರ ತಿರುವು ಸಿಕ್ಕಿದೆ. ಮದುವೆಗೆ ನಿರಾಕರಿಸಿದ್ದಕ್ಕೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಶಂಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕೃತ್ಯ ಪೂರ್ವನಿಯೋಜಿತವೇ ಅಥವಾ ಅಲ್ಲವೇ ಎಂಬ ಬಗ್ಗೆ ತನಿಖೆ ಬಳಿಕ ಗೊತ್ತಾಗಲಿದೆ.

ಸಂತ್ರಸ್ತೆ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.

ಪ್ರಮುಖ ಆರೋಪಿ ಸಂತ್ರಸ್ತೆಗೆ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದ. ಬೆದರಿಕೆ ಕೂಡ ಹಾಕಿದ್ದ. ಆದರೆ ಆಕೆ ಮದುವೆಗೆ ಒಪ್ಪಿಲ್ಲ. ಹೀಗಾಗಿಯೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸಂತ್ರಸ್ತೆ ತನಗೆ ಗೆಳೆಯನಿದ್ದಾನೆ. ತಾನು ಆತನಿಗೆ ಮೋಸ ಮಾಡಲ್ಲ. ಬೇರೆ ಮದುವೆಯಾಗಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಳು ಎಂಬುದು ಗೊತ್ತಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇನ್ನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವುದು ನಿಜ ಎಂದು ವೈದ್ಯಕೀಯ ಪರೀಕ್ಷೆಯಲ್ಲಿಯೂ ದೃಢಪಟ್ಟಿದೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯ ಫೋನ್ ಕರೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!