ಸಕಾಲ ಸೇವೆಗಳಿಗೆ ಸರ್ಕಾರ ನಿಗದಿಪಡಿಸಿಕ್ಕಿಂತ ಹೆಚ್ಚು ಹಣವನ್ನು ಗ್ರಾಹಕರಿಂದ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದ ಮಾನ್ಯತೆಯನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ರದ್ದುಪಡಿಸಿದ್ದಾರೆ.

ಆಧಾರ್ ಕಾರ್ಡ್‌ನಲ್ಲಿ ನಂಬರ್ ಬದಲಾವಣೆಗೆ ₹50ರ ಬದಲಾಗಿ ₹350, ಪಾನ್‌ಕಾರ್ಡ್ ಹೆಸರು ಬದಲಾವಣೆಗೆ ₹ 150ರ ಬದಲಿಗೆ ₹1,000 ಹಣ ವಸೂಲಿ ಮಾಡುತ್ತಿರುವ ಕುರಿತು ನೀರು ಸಲ್ಲಿಕೆಯಾಗಿತ್ತು.

ಈ ಬಗ್ಗೆ ನಾಡಕಚೇರಿ ಉಪ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ಕಂದಾಯ ಇಲಾಖೆಯ ಸ್ಥಳೀಯ ಅಧಿಕಾರಿಗಳು ನಾಮಫಲಕ ತೆರವುಗೊಳಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!