ಪುತ್ತೂರು, ಜೂನ್ 29 – ಪುತ್ತೂರಿನ ಮುಕ್ರಂಪಾಡಿ ಬಳಿ ಭಾನುವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ.

ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ತಾರ್ ಜೀಪ್, ಪುತ್ತೂರು ಕಡೆಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಬಳಿಕ, ಕಾರಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ. ಅಪಘಾತದ ಪರಿಣಾಮವಾಗಿ ಜೀಪ್ ಸಂಪೂರ್ಣ ನುಜ್ಜುಗುಜ್ಜಾಗಿದೆ

ಅಪಘಾತದಲ್ಲಿ ಜೀಪ್ ಚಾಲಕ, ದೇವಸ್ಯ ನಿವಾಸಿ ಮನೋಜ್ ಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



Leave a Reply

Your email address will not be published. Required fields are marked *

Join WhatsApp Group
error: Content is protected !!