ಕಡಬ: ಕುದ್ಮಾ‌ರ್ ಗ್ರಾಮದ ಐತಿಹಾಸಿಕ ಕೂರತ್ ಮಸೀದಿಯಲ್ಲಿ ಜೂನ್ 29ರಂದು ನಡೆದ ವಾರ್ಷಿಕ ಉರೂಸ್ ಕಾರ್ಯಕ್ರಮವು ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಕಾರ್ಯಕ್ರಮದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಅಸ್ವಸ್ಥಗೊಂಡ ಆರು ಮಂದಿಗೆ ತಕ್ಷಣವೇ ವೈದ್ಯಕೀಯ ನೆರವು ನೀಡಿ ಉಪಚರಿಸಲಾಗಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ…

ಪೊಲೀಸ್ ಪ್ರಕಟಣೆ :ದಿನಾಂಕ 29.06.2025 ರಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಫ್ತಿಯ ಕುದ್ಮಾರ್ ಗ್ರಾಮಾದ ಕೂರತ್ ಮಸೀದಿ ಯಲ್ಲಿ ಉರುಸ್ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಸದ್ರಿ ಕಾರ್ಯಕ್ರಮಕ್ಕೆ ಬೇರೆ ಬೇರೆ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿರುತ್ತಾರೆ. ಜನದಟ್ಟಣೆಯಲ್ಲಿ 06 ಜನರು ದೈಹಿಕವಾಗಿ ನಿತ್ರಾಣಗೊಂಡಿದ್ದು, ಅವರುಗಳನ್ನು ಸ್ಥಳದಲ್ಲಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಚರಿಸಲಾಗಿ  ಇಬ್ಬರ ಆರೋಗ್ಯ ಸ್ಥಳದಲ್ಲೇ ಸುಧಾರಿಸಿರುತ್ತದೆ. ಉಳಿದ 04 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ತೆರಳಿರುತ್ತಾರೆ. ಸದ್ರಿ ಉರುಸ್ ಕಾರ್ಯಕ್ರಮ ಮುಕ್ತಾಯಗೊಂಡಿರುತ್ತದೆ.

  ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳು ಹರಡದಂತೆ ಹಾಗೂ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದಾಗಿ ವಿನಂತಿ.

Leave a Reply

Your email address will not be published. Required fields are marked *

Join WhatsApp Group
error: Content is protected !!