ಮಂಗಳೂರು :ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಕೃಷ್ಣನ್‌ ಹರಿಹರ ಶರ್ಮಾ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್‌ ರಾವ್‌ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಬ್ಯಾಂಕ್‌ನ ನಿರ್ದೇಶಕರ ಮಂಡಳಿ ರವಿವಾರ ಸ್ವೀಕರಿಸಿದೆ.

ಕರ್ಣಾಟಕ ಬ್ಯಾಂಕ್ ಇತಿಹಾಸದಲ್ಲಿ ಮೊದಲ ಬಾರಿಗೆ ಬ್ಯಾಂಕ್ ನಿಂದ ಹೊರಗಿನವರಿಗೆ ಎಂಡಿ ಮತ್ತು ಸಿಇಓ ಪಟ್ಟ ಕೊಡಲಾಗಿತ್ತು. ಆದರೆ ಬ್ಯಾಂಕ್ ಆಡಳಿತ ಮಂಡಳಿ ಮತ್ತು ಸಿಇಓ ನಡುವೆ ಒಂದು ವಿಚಾರಕ್ಕೆ ತಿಕ್ಕಾಟ ಎರ್ಪಟ್ಟಿತ್ತು. ಇದು ಇದೀಗ ರಾಜೀನಾಮೆ ಹಂತಕ್ಕೆ ಬಂದು ತಲುಪಿದೆ.ಬ್ಯಾಂಕಿನ ಅಧಿಕೃತ ಲೆಕ್ಕಪರಿಶೋಧಕರಾದ ರವಿ ರಾಜನ್ ಆಂಡ್‌ ಕೊ ಎಲ್‌ಎಲ್‌ಪಿ ಮತ್ತು ಆರ್‌ಜಿಎನ್‌ ಪ್ರೈಸ್ ಆಂಡ್‌ ಕೊ ಮೇ ತಿಂಗಳಲ್ಲಿ ತಮ್ಮ ಟಿಪ್ಪಣಿಯಲ್ಲಿ, ಬ್ಯಾಂಕ್‌ ಸಲಹೆಗಾರರನ್ನು ತೊಡಗಿಸಿಕೊಳ್ಳುವ ಮತ್ತು ಬ್ಯಾಂಕಿನ ಪೂರ್ಣಾವಧಿ ನಿರ್ದೇಶಕರ ಅಧಿಕಾರವನ್ನು ಮೀರಿ ಇತರ ಉದ್ದೇಶಗಳಿಗಾಗಿ ಮಾಡಿದ 1.53 ಕೋಟಿ ರೂ. ವೆಚ್ಚದ ಬಗ್ಗೆ ಉಲ್ಲೇಖಿಸಿದ್ದರು.

ಆದರೆ, ಇದಕ್ಕೆ ಆಡಳಿತ ಮಂಡಳಿಯ ಅನುಮೋದನೆ ಪಡೆದುಕೊಂಡಿರಲಿಲ್ಲ. ಈ ಸಂಬಂಧ ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಆಡಳಿತ ನಡುವೆ ವ್ಯತ್ಯಾಸಗಳು ಹುಟ್ಟಿಕೊಂಡಿದ್ದವು. ‘ಈ ಮೊತ್ತವನ್ನು ಸಂಬಂಧಪಟ್ಟ ನಿರ್ದೇಶಕರಿಂದ ವಸೂಲಿ ಮಾಡಬಹುದು’ ಎಂದು ಲೆಕ್ಕಪರಿಶೋಧಕರು ಹೇಳಿದ್ದರು. ಆ ವೆಚ್ಚದ ಸಂಬಂಧ ಹುಟ್ಟಿಕೊಂಡಿದ್ದ ವಿವಾದ ಇದೀಗ ಇಬ್ಬರ ಹುದ್ದೆಯಿಂದ ಕೆಳಗಿಳಿಯುವ ಹಂತಕ್ಕೆ ಬಂದಿದೆ.
ಶ್ರೀಕೃಷ್ಣನ್‌ ಹರಿಹರ ಶರ್ಮಾ ಬಳಿಕ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಹಿರಿಯ ಅಧಿಕಾರಿ ಶೇಖರ್ ರಾವ್ ಕೂಡ ಜುಲೈ 30 ರೊಳಗೆ ತಮ್ಮ ಹುದ್ದೆಯಿಂದ ಕೆಳಗಿಳಿಯುವ ನಿರೀಕ್ಷೆ ಇದೆ.
ಬ್ಯಾಂಕ್ ನ ಇತಿಹಾಸದಲ್ಲಿ ಮೊದಲ ಬಾರಿಗೆ ಉನ್ನತ ಹುದ್ದೆಗೆ ಹೊರಗಿನವರಿಗೆ ಮಣಿ ಹಾಕಿದ್ದ ಕರ್ಣಾಟಕ ಬ್ಯಾಂಕ್ ಆಡಳಿತ ಮಂಡಳಿಗೆ ಇದು ದೊಡ್ಡ ಹೊಡೆತ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!