ಬಂಟ್ವಾಳ: ಭೀಕರ ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಪಾವೂರು ನಿವಾಸಿ ನೌಫಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!