
ಪುತ್ತೂರು: ಪ್ರತಿ ಜಡಿ ಮಳೆಗೂ ಪುತ್ತೂರು ನಗರಸಭೆ ವ್ಯಾಪ್ತಿಯ ನೆಲ್ಲಿಕಟ್ಟೆ ಖಾಸಗಿ ಬಸ್‌ನಿಲ್ದಾಣ ಬಳಿಯ ರಸ್ತೆ ಹೊಳೆಯಂತಾಗುತ್ತದೆ. ಜು. 06 ರಂದು ಬೆಳಗ್ಗೆ ಸುರಿದ ಧಾರಾಕಾರ ಮಳೆಯಿಂದ ರಸ್ತೆ ಹೊಳೆಯಂತಾಗಿದ್ದು, ಪಾದಚಾರಿಗಳಿಗೆ ಸಂಕಷ್ಟ ಎದುರಾಗಿದೆ.
ಮಳೆ ನೀರು ಹರಿದು ಹೋಗುವ ಚರಂಡಿ ಬ್ಲಾಕ್ ಆಗಿದ್ದು, ರಸ್ತೆಯಲ್ಲೇ ನೀರು ಹರಿಯುತ್ತಿದೆ. ಕೆಸ್‌ಆರ್‌ಟಿಸಿ ಬಸ್‌ನಿಲ್ದಾಣದಿಂದ ಖಾಸಗಿ ಬಸ್ ನಿಲ್ದಾಣಕ್ಕೆ ರಸ್ತೆ ಸೇರುವ ಮತ್ತು ಇತ್ತ ಕಡೆ ಅಭಿಮಾನ್ ಬಾರ್ ಆಂಡ್ ರೆಸ್ಟೋರೆಂಟ್ ಕಡೆಯಿಂದ ಬರುವ ರಸ್ತೆ ಮಳೆ ನೀರಿನಿಂದ ತುಂಬಿ ಹರಿಯುತ್ತಿದೆ.






