ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸರು ಅಕ್ರಮ ದನ ಸಾಗಾಟದ ಪ್ರಕರಣವನ್ನು ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಿ ಘಟನೆ ಜು 7 ರಂದು  ನಡೆದಿದೆ . ಸಾಗಾಟಕ್ಕೆ ಬಳಸಿದ ಪಿಕಪ್ ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.ಪಿಎಸ್‌ಐ ಗುರುನಾಥ ಬಿ. ಹಾದಿಮನಿ ನೇತೃತ್ವದ ತಂಡವು ಗಸ್ತಿನಲ್ಲಿದ್ದಾಗ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಪಿಲಿಗೂಡು ಸಮೀಪ ಪೆದಮಲೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನ (ಕೆಎ20, ಬಿ 3993) ದಲ್ಲಿ ದನಗಳನ್ನು ಸಾಗಿಸುತ್ತಿರುವುದು ಕಂಡುಬಂದಿದೆ. ವಾಹನವನ್ನು ತಪಾಸಣೆ ಮಾಡಿದಾಗ, ಆರೋಪಿಗಳಾದ ಅಬೂಬಕ್ಕರ್ ಯಾನೆ ಶಮೀ‌ರ್, ಇಮ್ರಾನ್, ಮತ್ತು ಮೊಹಮ್ಮದ್ ಅಕ್ರಮ್ ಯಾವುದೇ ಪರವಾನಗಿಯಿಲ್ಲದೆ, ಹಿಂಸಾತ್ಮಕ ರೀತಿಯಲ್ಲಿ ದನಗಳನ್ನು ವಧೆಗಾಗಿ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪೊಲೀಸರು ₹22 ಸಾವಿರ ಮೌಲ್ಯದ ದನಗಳು ಮತ್ತು ₹2 ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!