ವಿಟ್ಲ, ಜುಲೈ 9: ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು ವಿಟ್ಲ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 08.07.2025 ರಂದು ಸಂಜೆ, ಪಿರ್ಯಾದುದಾರರ ಅಪ್ರಾಪ್ತ ಸಹೋದರನು ತನ್ನ ಶಾಲಾ ಸಹಪಾಠಿಯೊಂದಿಗೆ ನಿಲ್ದಾಣದಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ, ಆರೋಪಿತನು ಸ್ಥಳಕ್ಕೆ ಬಂದು ಹಿಂದೂ ಹುಡುಗಿಯೊಂದಿಗೆ ಮಾತನಾಡುತ್ತಿರುವ ಬಗ್ಗೆ ತಕರಾರು ತಂದುಕೊಂಡು ಬಾಲಕನಿಗೆ ಬೆದರಿಕೆ ಹಾಕಿದ ಎಂದು ತಿಳಿದುಬಂದಿದೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 83/2025 ರಂತೆ BNS 2023 ನ ಕಲಂ 126(2), 352, 351(3), 196(1)(a) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಹಾಗೂ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.














