ಮುಂದಿನ 6 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಅದೇ ರೀತಿ ಮುಂದಿನ 3 ದಿನ ಉತ್ತರ ಒಳನಾಡು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ವರುಣ ಅಬ್ಬರಿಸುವ ಸಾಧ್ಯತೆ ಇದೆ.

ಇನ್ನು ಜುಲೈ 10ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Karnataka weather) ನಿರೀಕ್ಷೆ ಇದ್ದು, ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ, ಹಾವೇರಿ, ಬಾಗಲಕೋಟೆ ಸೇರಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

ಜುಲೈ 11ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ರಾಯಚೂರು, ಕೊಪ್ಪಳ, ಯಾದಗಿರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಇದೆ.

ಜುಲೈ 12ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ, ಹಾವೇರಿ ಬಾಗಲಕೋಟೆ, ಗದಗ ಹಾಗೂ ದಕ್ಷಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ಮೈಸೂರು, ಮಂಡ್ಯ, ವಿಜಯನಗರ ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 13ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ ಸೇರಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜುಲೈ 14 ಮತ್ತು 15ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ಬಳ್ಳಾರಿ, ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!