
ಬಂಟ್ವಾಳ: ಕೊಳ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಾರಿ ಪುದು ಗ್ರಾಮದ ನಿವಾಸಿ ಪ್ರದೀಪ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈತನ ಬಂಧನೆಯೊಂದಿಗೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದ್ದು, ಮಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.






