ಪುತ್ತೂರು: ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್‌ ಸಂಸ್ಥೆಯು ಪುತ್ತೂರಿನಲ್ಲಿ ಆರಂಭಗೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿನ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ಜುಲೈ 15ರಂದು ಪುತ್ತೂರು ಬೊಳವಾರು ಇನ್‌ಲ್ಯಾಂಡ್ ಕಮರ್ಶಿಯಲ್ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಆಲ್ವಿನ್ ಜೋಯಲ್ ನೊರೊನ್ಹಾ ಅಧ್ಯಕ್ಷತೆ ವಹಿಸಲಿದ್ದು, ಅರುಣ್ ಕುಮಾರ್ ಪುತ್ತಿಲ, ಶ್ರೀ ಕೃಷ್ಣ ಉಪಾಧ್ಯಯ, ನರಸಿಂಹ ಪ್ರಸಾದ್ ಹಾಗೂ ಮೊಹಮ್ಮದ್ ಬಡಗನ್ನೂರು,ಶಿವರಾಮ ಆಳ್ವ, ದೀಪಕ್ ಮೆನೆಜಸ್, ಮನ್ಮಥ ಶೆಟ್ಟಿ,ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಶಾಖಾ ಅಧ್ಯಕ್ಷ ಪುನಿತ್ ವಿ.ಜೆ ಮಾಧ್ಯಮಕ್ಕೆ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್‌ ಸಂಸ್ಥೆ ಬ್ಯಾಂಕ್ ಮಾದರಿಯಲ್ಲಿಯೇ ಸಾರ್ವಜನಿಕರ ಹಣಕಾಸು ನಿರ್ವಹಣೆಯಲ್ಲಿ ತೊಡಗಿರುವ ಸಂಸ್ಥೆಯಾಗಿದ್ದು, ಆರಂಭವಾಗಿ ನಾಲ್ಕೇ ವರ್ಷದಲ್ಲಿ 15 ಶಾಖೆಗಳನ್ನು ಸ್ಥಾಪಿಸಿರುವ ಮಹತ್ತ್ವದ ಸಾಧನೆ ಗೈದಿದೆ. ಈ ಸಂಸ್ಥೆಯ ಪ್ರಧಾನ ಕಚೇರಿ ಮೂಡುಬಿದ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!