ಧರ್ಮಸ್ಥಳ: ಇಲ್ಲಿ 2003ನೇ ಇಸವಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಅವರ ತಾಯಿ ದ.ಕ.ಎಸ್ ಪಿಗೆ ಜು.15ರಂದು ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಅದರಲ್ಲಿ “ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಸದ್ರಿ ಯುವತಿಯ ತಾಯಿ ಈ ದಿನ ದಿನಾಂಕ 15.07.2025 ರಂದು ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕಛೇರಿಯಲ್ಲಿ ಪೊಲೀಸ್‌ ಅಧೀಕ್ಷಕರಿಗೆ ದೂರು ಅರ್ಜಿ ನೀಡಿರುತ್ತಾರೆ.

ಜಿಲ್ಲಾ ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ, “ಅನನ್ಯ ಭಟ್ ಎಂಬ ವೈದ್ಯಕೀಯ ವಿದ್ಯಾರ್ಥಿನಿ 2003ರಲ್ಲಿ ಧರ್ಮಸ್ಥಳದ ವಠಾರದಿಂದ ಕಾಣೆಯಾಗಿದ್ದರು. ಈ ಕುರಿತು ಅವರ ತಾಯಿ ದೂರು ಸಲ್ಲಿಸಿದ್ದು, ಪ್ರಕರಣದ ಕುರಿತಂತೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ. ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು,” ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!