ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯ‌ರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯ‌ರ್ ಡಿಸೈನ್ ಸಂಘಟನೆ ಹಾಗೂ “ಭಾರತ್ ಅಕಾಡಮಿ ಆಫ್ ಲಿಬರಲ್‌ ಎಜುಕೇಷನ್” (BASE) ಜಂಟಿಯಾಗಿ ໐໖ “Auto Desk- 3DS Max & 3D Rendering” ಎಂಬ ವಿಷಯದಲ್ಲಿ ನಡೆದ ಕಾರ್ಯಾಗಾರದ ಭಾಗವಾಗಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್, ಆಡಳಿತಾಧಿಕಾರಿ ಅರ್ಪಿತ್ ಟಿ ಎ ಮತ್ತು ಉಪ ಪ್ರಾಂಶುಪಾಲ ರಕ್ಷಣ ಟಿ ಆರ್ ಉಪಸ್ಥಿತರಿದ್ದರು.

ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್‌ ಅವರು ಮಾತನಾಡಿ, ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿಯನ್ನು ನೀಡುವುದರ ಮೂಲಕ ವಿಷಯಗಳನ್ನು ಮನದಟ್ಟು ಮಾಡುವಲ್ಲಿ ಸಹಕಾರಿಯಾಗಿದೆ. ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

BASE ಅಕಾಡಮಿಯ ಸ್ಥಾಪಕ ನವೀನ್ ಗುರುರಾಜ್ ವಿದ್ಯಾರ್ಥಿಗಳಿಗೆ Auto Desk- 3DS Max & 3D Rendering” ನ ವಿಷಯದ ಬಗ್ಗೆ ಮಾರ್ಗದರ್ಶನ ನೀಡಿದರು. ನಿರ್ವಾಹಕಿ ಸುಧಾ ಜಯರಾಮ್, ಇಂಟಿರಿಯರ್ ಡಿಸೈನ್ ವಿಭಾಗದ ಸಹಪ್ರಾಧ್ಯಾಪಕಿಯಾರಾದ ಕಾವ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಹಾಗು ಇಂಟೀರಿಯರ್ ಡಿಸೈನ್ ವಿಭಾಗದ ಮುಖ್ಯಸ್ತರು ರಕ್ಷಣ ಟಿ ಆ‌ರ್ ಕಾರ್ಯಕ್ರಮವನ್ನು ನಿರೂಪಿಸಿದರು

Leave a Reply

Your email address will not be published. Required fields are marked *

Join WhatsApp Group
error: Content is protected !!