
ಪುತ್ತೂರು ತಾಲೂಕು ಕುರಿಯ ಗ್ರಾಮದ ಅಜಲಾಡಿ ಎಂಬಲ್ಲಿ ವಾಸಿಸುತ್ತಿರುವ ಝೀನತ್ ರವರ ಮನೆಯೊಂದು ಜುಲೈ 15ರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಗೆ ಭಾಗಶಃ ಕುಸಿದು ಬಿದ್ದಿದೆ. ಈ ಘಟನೆಯಿಂದ ಮನೆಗೆ ಅಪಾರ ಹಾನಿ ಉಂಟುಮಾಡಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಗ್ರಾಮ ಪಂಚಾಯತಿ ಸದಸ್ಯರಾದ ಯಾಕೂಬ್ ಕುರಿಯ ಅವರು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ, ಅಗತ್ಯ ಮಾಹಿತಿ ಸಂಗ್ರಹಿಸಿದರು.






