ಮಂಗಳೂರು,-ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಸುರಿದ ಭಾರೀ ಮಳೆಗೆ ಮೇರಿಹಿಲ್ ಬಳಿ ತಡೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
ಸುಮಾರು ೮ ರಿಂದ ೧೦ ದ್ವಿಚಕ್ರ ವಾಹನಗಳು ಮತ್ತು ಗೋಡೆಯ ಕೆಳಗೆ ನಿಲ್ಲಿಸಿದ್ದ ಒಂದು ಕಾರು ಹಾನಿಗೊಳಗಾಗಿವೆ. ಅದೃಷ್ಟವಶಾತ್, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!