

ಪುತ್ತೂರು: ಪುತ್ತೂರಿನ ನಗರದ ಅಭಿವೃದ್ಧಿ ಮತ್ತು ಆಡಳಿತ ಸುಧಾರಣೆಯಲ್ಲಿ ಪತ್ರಕರ್ತರ ಕೊಡುಗೆ ಮಹತ್ವದ್ದಾಗಿದೆ. ಮಾದ್ಯಮಗಳಲ್ಲಿ ಬರುವ ಟೀಕೆ, ವಿಮರ್ಶೆ ಹಾಗೂ ಸಮಸ್ಯೆಗಳ ಬಗೆಗಿನ ವರದಿಗಳು ನಮ್ಮನ್ನು ಧನಾತ್ಮಕ ಚಿಂತನೆಗೆ ಒಳಗಾಗಿಸುತ್ತವೆ. ಈ ನಿಟ್ಟಿನಲ್ಲಿ ಸಾಕಷ್ಟು ಬದಲಾವಣೆಗಳನ್ನೂ ಮಾಡಿದ್ದೇವೆ. ಇದರ ಜತೆಗೆ `ಬ್ರಾö್ಯಂಡ್ ಪುತ್ತೂರು’ ಪರಿಕಲ್ಪನೆಯ ಸಾಕಾರಕ್ಕೆ ಪತ್ರಕರ್ತರು ದೊಡ್ಡ ಕೊಡುಗೆ ಬೇಕಾಗಿದೆ ಎಂದು ಪುತ್ತೂರಿ ನಗರಸಭೆಯ ಪೌರಾಯಕ್ತ ಮಧು ಎಸ್ ಮನೋಹರ್ ಅಭಿಪ್ರಾಯಪಟ್ಟರು.
ಶನಿವಾರ ಪುತ್ತೂರು ಪತ್ರಿಕಾಭವನದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬ್ರಾ÷್ಯಂಡ್ ಮಂಗಳೂರು ಕಾರ್ಯರೂಪಕ್ಕೆ ಬರುವಲ್ಲಿ ಜಿಲ್ಲೆಯ ಪತ್ರಕರ್ತರ ಕೊಡುಗೆ ಸಾಕಷ್ಟಿದೆ. ಅದೇ ರೀತಿ ಜಿಲ್ಲೆಯ ಎರಡನೇ ಅತಿದೊಡ್ಡ ನಗರವಾದ ಪುತ್ತೂರು ಕೂಡಾ ಹೊಸಚೈತನ್ಯ ಪಡೆದುಕೊಳ್ಳಬೇಕಾಗಿದೆ. ಲೇಖನಿಯ ಮೂಲಕ ಮಾಧ್ಯಮಗಳಿಂದು ದೇಶ ಸುಧಾರಣೆಯ ಕೆಲಸ ಮಾಡುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ. ಸಾಮಾಜಿಕವಾದ ಕ್ರಾಂತಿ ಮೂಡಿಸುವ ಶಕ್ತಿ ಲೇಖನಿಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಮಾದ್ಯಮಗಳ ವೇಗ ಹೆಚ್ಚಾಗಿದೆ. ಅದರೊಂದಿಗೆ ಸುಳ್ಳುಸುದ್ದಿಗಳ ವಿಜೃಂಭಣೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯನಿರತ ಪತ್ರಕರ್ತರು ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳಾದ ಪುಣ್ಯಶ್ರೀöಪಾಲೆತ್ತಾಡಿ, ಸಿಹಾಸಮ್ರಾ ಸಂಪ್ಯ ಮತ್ತು ಕೃತಿ ಕಲ್ಲಾರೆ ಅವರನ್ನು ಸಂಘದ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಸನ್ಮಾನಿಸಿದರು.
ನಂತರ ಮಾತನಾಡಿದ ಅವರು ಅಭಿವ್ಯಕ್ತಿಯ ರೀತಿಯಲ್ಲಿ ಬದಲಾವಣೆ ಇದ್ದರೂ ಪತ್ರಿಕೆ ಮತ್ತು ಸಾಹಿತ್ಯದ ಮೂಲಧ್ವನಿ ಏಕಚಿಂತನೆಯದ್ದಾಗಿದೆ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳು ಹಾದಿ ತಪ್ಪಿದಾದ ಅವುಗಳನ್ನು ತಿದ್ದುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕಾರಂಗ ಮಾಡುತ್ತದೆ. ಅವುಗಳನ್ನು ಅಲುಗಾಡಿಸುವ ಶಕ್ತಿಯೂ ಮಾದ್ಯಮಗಳಿವೆ ಎಂದು ಹೇಳಿದರು.
ದಕ್ಷಿಣಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಜಿಲ್ಲಾ ಸಂಘದಿAದ ಸುವರ್ಣ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗುವುದು. ಇದು ತಾಲೂಕು ಮಟ್ಟದಲ್ಲೂ ನಡೆಯಲಿದೆ ಎಂದರು. ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಶುಭ ಹಾರೈಸಿದರು. ಪುತ್ತೂರು ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ ಅಧ್ಯಕ್ಷತೆ ವಹಿಸಿದ್ದರು. ಸಂಘದ ಸದಸ್ಯ ಮೇಘಾ ಪಾಲೆತ್ತಾಡಿ ಸ್ವಾಗತಿಸಿದರು. ಸದಸ್ಯ ಸುಧಾಕರ ಸುವರ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ ವಂದಿಸಿದರು.





