
ಪುತ್ತೂರು:ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ಸಂಪ್ಯ ಆರ್ಯಾಪು ಇದರ ಅಂಗ ಸಂಸ್ಥೆಯಾದ ಅಕ್ಷಯ ಕಾಲೇಜು ಪುತ್ತೂರು ಹಾಗೂ ಈ ವರ್ಷದಿಂದ ಕಾರ್ಯಾರಂಭಗೊಳ್ಳುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜು ಪುತ್ತೂರು ವತಿಯಿಂದ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸದಾಗಿ ದಾಖಲಾತಿ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ಉದ್ದೇಶಿಸಿ “ದೃಷ್ಟಿ-2025” ಎಂಬ ಹೆಸರಿನಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ಜುಲೈ 17 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಉದ್ದೇಶ, ನವಪ್ರವೇಶಿತ ವಿದ್ಯಾರ್ಥಿಗಳಿಗೆ ಪ್ರಸಕ್ತ ಕಾಲಘಟ್ಟದ ಶೈಕ್ಷಣಿಕ ಸವಾಲುಗಳ ಅರಿವು ನೀಡುವುದು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಪೋಷಕರ ಪಾತ್ರ ಮತ್ತು ಜವಾಬ್ದಾರಿಗಳ ಬಗ್ಗೆ ಜಾಗೃತಿ ಮೂಡಿಸುವುದಾಗಿತ್ತು.
ಕಾರ್ಯಕ್ರಮವನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಜಯಂತ್ ನಡುಬೈಲು ದೀಪ ಬೆಳಗಿ ಉದ್ಘಾಟಿಸಿದರು. ಅವರು ಇಂತಹ ಕಾರ್ಯಾಗಾರಗಳ ಪ್ರಾಮುಖ್ಯತೆಯನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಡಾ. ರವಿ ಕುಮಾರ್ ಎಲ್. ಪಿ., ಖ್ಯಾತ ಶಿಕ್ಷಣ ತಜ್ಞರು ಹಾಗೂ ವಿಶ್ವಸಂಸ್ಥೆಯ ಭಾರತೀಯ ಪ್ರಾದೇಶಿಕ ಕಾರ್ಯದರ್ಶಿಗಳು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಅವರು ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಸ್ಪರ್ಧೆಗಳು, ಜೀವನ ಮೌಲ್ಯಗಳು ಹಾಗೂ ಪೋಷಕರ ಜವಾಬ್ದಾರಿಗಳ ಕುರಿತು ವಿಶೇಷ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಕ್ಷಯ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್, ಅಕ್ಷಯ ಪಿಯು ಕಾಲೇಜಿನ ಪ್ರಾಂಶುಪಾಲಿ ಗಂಗಾರತ್ನ, ಅಕ್ಷಯ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ, ಆಡಳಿತ ಅಧಿಕಾರಿ ಅರ್ಪಿತ್ ಟಿ. ಎ. ಹಾಗೂ ಉಪಪ್ರಾಂಶುಪಾಲಿ ರಕ್ಷಣ ಟಿ. ಆರ್. ಉಪಸ್ಥಿತರಿದ್ದರು.
ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸುಪ್ರಭಾ ಕೆ. ಕಾರ್ಯಕ್ರಮವನ್ನು ನಿರ್ವಹಿಸಿದರು.






