ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಮೇಗಿನ‌ ಪಂಜ ಎಂಬಲ್ಲಿನ ನಿವಾಸಿ, ಅರ್ಯಾಪು ಗ್ರಾಪಂನ ಮಾಜಿ ಅಧ್ಯಕ್ಷೆ ಸರಸ್ವತಿ ಅವರ ಪತಿ ವಿಶ್ವನಾಥ ನಾಯ್ಕ(42) ಅವರು ಸೋಮವಾರ ಬೆಳಗ್ಗೆ ನಿಧನರಾದರು.
ಕೂಲಿ ಕಾರ್ಮಿಕರಾಗಿದ್ದ ವಿಶ್ವನಾಥ ಅವರು ಭಾನುವಾರ ಸಂಜೆ ಅಸ್ವಸ್ಥತೆ ಗೆ ಒಳಗಾಗಿದ್ದರು. ಅವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಅವರು ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ ಮತ್ತು ಮೂವರು ಪುತ್ರಿ ಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!