
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ಧಿ ಕಾರ್ಯದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ವಿವಿಧ ಕಡೆಗಳಲ್ಲಿ ಬೇರೆಯವರ ಸ್ವಾಧೀನದಲ್ಲಿದ್ದ ಜಾಗವನ್ನು ದೇವಳಕ್ಕೆ ಮರುಸ್ವಾಧೀನ ಪಡಿಸುವ ಕಾರ್ಯ ಇನ್ನಷ್ಟು ಚುರುಕುಗೊಂಡಿದೆ.
ಶಾಸಕ ಅಶೋಕ್ ರೈ ಅವರ ಮಾರ್ಗದರ್ಶನದಡಿ, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಸಮಿತಿ ಸದಸ್ಯರು ಸೌಹಾರ್ದಯುತ ರೀತಿಯಲ್ಲಿ ಈ ಪ್ರಕ್ರಿಯೆಗೆ ಮುಂದಾಗಿ, ಜುಲೈ 22 ರಂದು ನೆಲ್ಲಿಕಟ್ಟೆಯಲ್ಲಿ ಸುಮಾರು 1.8 ಎಕರೆ ಜಾಗವನ್ನು ದೇವಳದ ಹೆಸರಿಗೆ ಮರುಸ್ವಾಧೀನ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಜಾಗವು ಪುರಾತನದಿಂದ ಗೇಣಿ ಹಕ್ಕಿನಡಿಯಲ್ಲಿ ಇದ್ದಿದ್ದು, ನೋಟರಿ ನ್ಯಾಯವಾದಿ ನಿರ್ಮಲ್ ಕುಮಾರ್ ಜೈನ್ ಅವರು ಸಂತೋಷಪೂರ್ವಕವಾಗಿ ದೇವಾಲಯಕ್ಕೆ ಜಮೀನನ್ನು ಸಮರ್ಪಿಸಿದರು. ಈ ಅಪೂರ್ವ ಕ್ಷಣದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಸಾಕ್ಷಿಯಾದರು.
ಕಾರ್ಯಕ್ರಮದಲ್ಲಿ ಸಮಿತಿಯ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ.ವಿ., ವಿನಯ ಸುವರ್ಣ, ಈಶ್ವರ ಬೆಡೇಕರ್, ಸುಭಾಷ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ, ನಳಿನಿ ಪಿ ಶೆಟ್ಟಿ, ಉಪ್ಪಿನಂಗಡಿ ಪಂಚಲಿಂಗೇಶ್ವರ ದೇವಸ್ಥಾನದ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೈ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಕುಂಜೂರು ಮದಗ ಶ್ರೀ ಸದಾಶಿವ ದೇವಸ್ಥಾನದ ಸಮಿತಿ ಸದಸ್ಯ ರೋಹನ್ ರಾಜ್, ನಗರ ವಲಯ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್ ಗೌಡ ಪಡ್ಡಾಯೂರು, ಪ್ರಕಾಶ್ ಗೌಡ, ಸುದರ್ಶನ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.





