ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ವತಿಯಿಂದ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಹೊಸತಾಗಿ ಪ್ರಥಮ ವರ್ಷದಲ್ಲಿಗೆ ದಾಖಲಾತಿ ಪಡೆದಿರುವ ಪದವಿ ವಿದ್ಯಾರ್ಥಿಗಳಿಗಾಗಿ “ಪ್ರಜ್ಞಾನಮ್” ಎಂಬ ಸಂಸ್ಕೃತ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಸಂಸ್ಕೃತ ವಿಭಾಗ ಹಾಗೂ ಅಧ್ಯಯ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷೆಯ ಶೈಕ್ಷಣಿಕ ಸವಾಲುಗಳ ಕುರಿತು ಅರಿವು ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಈ ಶೈಕ್ಷಣಿಕ ವರ್ಷದಿಂದ ಆರಂಭವಾಗಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೂಡ ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರು ಕು. ಗಂಗಾ ರತ್ನ ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿನ ಭಾಷಾ ಅರಿವನ್ನು ಹೆಚ್ಚಿಸುತ್ತವೆ ಎಂದು ಹೇಳಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಅಕ್ಷಯ ಡಿಗ್ರಿ ಕಾಲೇಜಿನ ಪ್ರಾಂಶುಪಾಲ ಶ್ರೀ ಸಂಪತ್ ಕೆ ಪಕ್ಕಳ ಮಾತನಾಡಿ, “ಸಂಸ್ಕೃತದ ಛಾಯೆ ಎಲ್ಲಾ ಭಾರತೀಯ ಭಾಷೆಗಳಲ್ಲಿ ಕಾಣಸಿಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಅವರು ಸಂಸ್ಕೃತದ ಪಾರಂಪರಿಕ ಮತ್ತು ಆಧುನಿಕ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದ ಸಂತ ಆಲೋಷಿಯಸ್ ಕಾಲೇಜಿನ ಉಪನ್ಯಾಸಕಿ ಸುರೇಖಾ ಅವರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮೌಲ್ಯಗಳು ಮತ್ತು ಸವಾಲುಗಳನ್ನು ಸಂಸ್ಕೃತ ಭಾಷೆಯಲ್ಲಿ ತಿಳಿಸುವ ಪ್ರಯತ್ನ ಮಾಡಿದರು.

ಕಾರ್ಯಕ್ರಮದ ಆರಂಭದಲ್ಲಿ ರಮ್ಯಶ್ರೀ ಪ್ರಾರ್ಥಿಸಿದರು, ರಕ್ಷಾಟಿ ಆರ್ ಸ್ವಾಗತಿಸಿದರು, ಆಯುಷ್ ಶೆಟ್ಟಿ ಧನ್ಯವಾದ ಅರ್ಪಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥೆ ಸಾಯಿ ಕೃಪಾ ಕೆ ಪ್ರಾಸ್ತಾವಿಕ ಭಾಷಣ ಮಾಡಿದರು. ನಿರೂಪಣೆಯನ್ನು ಅಪೇಕ್ಷಾ ಟಿ ಶೆಟ್ಟಿ (ದ್ವಿತೀಯ ಬಿಸಿಎ) ನಿರ್ವಹಿಸಿದರು.


Leave a Reply

Your email address will not be published. Required fields are marked *

Join WhatsApp Group
error: Content is protected !!