
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪುತ್ತೂರು ತಾಲೂಕಿನಲ್ಲಿ ಜುಲೈ 24ರಂದು ಎಲ್ಲಾ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮುಂದಿನ ದಿನಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆವಿದೆ ಎಂದು ಮುನ್ಸೂಚನೆ ನೀಡಿದ್ದು, ಅದನ್ನು ಗಮನದಲ್ಲಿಟ್ಟುಕೊಂಡು ತಹಸೀಲ್ದಾರ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಈ ಆದೇಶವು ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಅನ್ವಯವಾಗುತ್ತದೆ.






