
ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸು ಅಡ್ಡಗಟ್ಟಿ ಚಾಲಕ ರಿಯಾಜ್ ಅಹಮ್ಮದ್ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ.
ಹಲ್ಲೆಯನ್ನು ತಡೆಯಲು ಯತ್ನಿಸಿದ ಪ್ರಯಾಣಿಕ ಅವಿನಾಶ್‌ಗೂ ಹೆಲ್ಮೆಟ್‌ನಿಂದ ತಲೆಗೆ ಹೊಡೆದು ಗಂಭೀರ ಗಾಯವಾಗಿರುವುದು ತಿಳಿದುಬಂದಿದೆ.
ಚಾಲಕ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಕ್ರಮ ಕೈಕೊಂಡು ಆರೋಪಿಗಳಾದ ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿಗಳಾದ ಜುನೈದ್ (24) ಮತ್ತು ಹಿಷಾಮ್ (18) ಅವರನ್ನು ಬಂಧಿಸಿದ್ದಾರೆ.
ಸರಕಾರಿ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕ ಶಾಂತಿ ಭಂಗದ ಆರೋಪದಡಿ ಪ್ರಕರಣ ದಾಖಲಾಗಿದೆ.






