
ನವದೆಹಲಿ: ಯೆಸ್ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)ವು ಅನಿಲ್ ಅಂಬಾನಿಯವರ ರಿಲಾಯನ್ಸ್ ಗ್ರೂಪ್‌ಗೆ ಸೇರಿದ ಹಲವಾರು ಕಂಪನಿಗಳ ಮೇಲೆ ಗುರುವಾರ ದಾಳಿ ನಡೆಸಿದೆ.
ಪ್ರಾಥಮಿಕ ಮಾಹಿತಿಯಂತೆ, ರಿಲಾಯನ್ಸ್ ಗ್ರೂಪ್‌ಗೆ ಸೇರಿದ 35ಕ್ಕೂ ಹೆಚ್ಚು ಸ್ಥಳಗಳು ಹಾಗೂ 50 ಕಂಪನಿಗಳ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿಗಳನ್ನು ಅಕ್ರಮ ಹಣ ವರ್ಗಾವಣೆಯ ವಿರುದ್ಧದ ಪಿಎಂಎಲ್‌ಎ (PMLA) ಕಾಯ್ದೆಯ ಸೆಕ್ಷನ್ 17 ಅಡಿಯಲ್ಲಿ ಕೈಗೊಳ್ಳಲಾಗಿದೆ.
ಸುಮಾರು ₹3,000 ಕೋಟಿ ಮೊತ್ತದ ಯೆಸ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದೆ. ಇದರ ಆಧಾರದ ಮೇಲೆ ಹಾಗೂ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ), ಬ್ಯಾಂಕ್ ಆಫ್ ಬರೋಡಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಮುಂತಾದ ಸಂಸ್ಥೆಗಳ ಮಾಹಿತಿಯನ್ನು ಪರಿಗಣಿಸಿ ಇಡಿ ಈ ಕ್ರಮಕ್ಕೆ ಮುಂದಾಗಿದೆ.






