
ಬೆಳ್ತಂಗಡಿ, ಜು.25: ಧರ್ಮಸ್ಥಳದಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ಮುಂದುವರೆಸುವ ಉದ್ದೇಶದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಳ್ತಂಗಡಿಯಲ್ಲಿ ಅಧಿಕೃತವಾಗಿ ತನ್ನ ಕಚೇರಿಯನ್ನು ಆರಂಭಿಸಲಿದೆ.
ಪೊಲೀಸ್ ಇಲಾಖೆಗೆ ಸೇರಿದ ಬೆಳ್ತಂಗಡಿ ಠಾಣೆ ಪಕ್ಕದಲ್ಲಿರುವ ಹೊಸ ಕಟ್ಟಡದ ನೆಲ ಮಹಡಿಯ ಎರಡು ಕೋಣೆಗಳನ್ನು ಎಸ್‌ಐಟಿ ತಂಡ ತನಿಖಾ ಕಾರ್ಯಾಚರಣೆಗೆ ಬಳಸಿಕೊಳ್ಳಲಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದ ಈ ಗಂಭೀರ ಪ್ರಕರಣವು ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಪ್ರಾಥಮಿಕ ತನಿಖೆ ಬಳಿಕ ಹೆಚ್ಚಿನ ವಿಚಾರಣೆಗೆ ಎಸ್‌ಐಟಿ ರಚನೆಯಾಗಿತ್ತು. ಇದೀಗ ಆ ತಂಡ ಸ್ಥಳೀಯವಾಗಿ ಕಚೇರಿ ಆರಂಭಿಸುವುದು ತನಿಖೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂಬ ನಿರೀಕ್ಷೆ ಮೂಡಿಸಿದೆ.





