ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳೂರಿಗೆ ಆಗಮಿಸಿದ್ದು, ತನಿಖೆ ಇನ್ನಷ್ಟು ಚುರುಕುಗೊಂಡಿದೆ.

ಡಿಐಜಿ ದರ್ಜೆಯ ಹಿರಿಯ ಪೊಲೀಸ್‌ ಅಧಿಕಾರಿ ಎಂ.ಎನ್. ಅನುಚೇತ್ ನೇತೃತ್ವದ ತಂಡ ಶುಕ್ರವಾರ ಸಂಜೆ ಮಂಗಳೂರಿಗೆ ಆಗಮಿಸಿದೆ. ಬೆಂಗಳೂರಿನಿಂದ ಸಂಜೆ 4 ಗಂಟೆಗೆ ವಿಮಾನದ ಮೂಲಕ ಆಗಮಿಸಿದ ಅವರು ನೇರವಾಗಿ ಮಲ್ಲಿಕಟ್ಟೆಯಲ್ಲಿರುವ ಸರ್ಕಾರಿ ಅತಿಥಿ ಗೃಹಕ್ಕೆ ತೆರಳಿ, ತಂಡದ ಇತರ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ತೀವ್ರ ಭದ್ರತೆ ಮಧ್ಯೆ ನಡೆದ ಸಭೆಯಲ್ಲಿ ಪ್ರಕರಣದ ತನಿಖಾ ಪ್ರಗತಿ, ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎಸ್‌ಐಟಿ ತಂಡದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳಿದ್ದಾರೆ. ಜೊತೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಠಾಣೆಗಳ ಇನ್ಸ್‌ಪೆಕ್ಟರ್‌ಗಳು, ಉಪನಿರೀಕ್ಷಕರು (ಎಸ್‌ಐ) ಹಾಗೂ ವಿವಿಧ ಶಾಖೆಗಳ ವಿಶೇಷ ತಂಡದ ಸಿಬ್ಬಂದಿಯನ್ನು ಸಹ ಸೇರಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!