
ಮಂಗಳೂರು, ಜು.25: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮೇ 27 ರಂದು ನಡೆದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಹ*ತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತನನ್ನು ಪುದು ಗ್ರಾಮದ ಸಚಿನ್ ಅಲಿಯಾಸ್ ಸಚ್ಚು ರೊಟ್ಟಿಗುಡ್ಡೆ (32) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಒಟ್ಟು 12 ಮಂದಿಯನ್ನು ಬಂಧಿಸಲಾಗಿದೆ. ತನಿಖೆ ಇನ್ನೂ ಮುಂದುವರಿದಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.





