ಬೆಳ್ತಂಗಡಿ, ಜು.26: ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಜುಲೈ 25ರ ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದೆ.

ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರ ನೇತೃತ್ವದ ಎಸ್‌ಐಟಿ ತಂಡದ ಜೊತೆ ಡಿಎಸ್ಪಿ ಲೋಕೇಶ್, ಇನ್ಸ್‌ಪೆಕ್ಟರ್ ಮಂಜುನಾಥ್ ಹಾಗೂ ಇತರ ಇಬ್ಬರು ಸಿಬ್ಬಂದಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿದ್ದರು. ತಂಡ, ಠಾಣೆಯ ಪಿಎಸ್ಐ ಸಮರ್ಥ್ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗಂಟೆಗಳ ಕಾಲ ಸಂಪೂರ್ಣ ದಾಖಲೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಪರಿಶೀಲನೆ ನಡೆಸಿತು.

ಆ ನಂತರ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಪಡೆಯುವ ಮೂಲಕ ತನಿಖೆಯ ಮುಂದಿನ ಹಂತಕ್ಕೆ ತಯಾರಿ ನಡೆಸಿದಂತೆ ತಿಳಿದು ಬಂದಿದೆ.
ಪರಿಣಾಮಕಾರಿಯಾಗಿ, ಧರ್ಮಸ್ಥಳ ಶವ ಹೂತು ಪ್ರಕರಣ ಹೊಸ ತಿರುವು ಪಡೆದುಕೊಳ್ಳುವ ನಿರೀಕ್ಷೆ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!