
ಬೆಳ್ತಂಗಡಿ, ಜು.26:ತಾಲೂಕು ವ್ಯಾಪ್ತಿಯಲ್ಲಿ ಉತ್ಸಾಹಿ ಮಳೆಯೊಂದಿಗೆ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಹತ್ವದ ಸೂಚನೆ ನೀಡಲಾಗಿದೆ.
ಮಾನ್ಯ ಪುತ್ತೂರು ಸಹಾಯಕ ಆಯುಕ್ತರು ಹಾಗೂ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಮಾಲೋಚಿಸಿ ಈ ಕೆಳಗಿನ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ:
1. ಜುಲೈ 26, 2025ರಂದು ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಅನುದಾನಿತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
2. ನೀರು ಸಂಗ್ರಹವಾಗುವ ತಗ್ಗು ಪ್ರದೇಶ, ನದಿತೀರ, ತೊಡುಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗದಂತೆ ಪಾಲಕರಿಗೆ ಎಚ್ಚರಿಕೆ ನೀಡಲಾಗಿದೆ.
3. ತಾಲೂಕು ಮತ್ತು ಪಂಚಾಯತ್ ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರದಲ್ಲಿ ಲಭ್ಯವಿರಬೇಕು ಮತ್ತು ವಿಪತ್ತು ನಿರ್ವಹಣಾ ಕಾರ್ಯಾಚರಣೆಯಲ್ಲಿ ಸಜಾಗತೆಯಿಂದ ಕಾರ್ಯ ನಿರ್ವಹಿಸಬೇಕು.
4. INCIDENT COMMANDER ಆಗಿ ನೇಮಕಗೊಂಡ ಅಧಿಕಾರಿಗಳು ತಮ್ಮ ವಾರ್ಡ್‌ಗಳಲ್ಲಿ ಸಜೀವ ಸಂಪರ್ಕದಲ್ಲಿ ಇರುತ್ತಾ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು.
5. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ, ತೊಡುಗಳಿಗೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
6. ಸಂಬಂಧಿತ ಇಲಾಖೆ ಅಧಿಕಾರಿಗಳು ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾಳಜಿ ಕೇಂದ್ರ (Control Room) ಆರಂಭಿಸಿ ಸನ್ನದ್ಧ ಸ್ಥಿತಿಯಲ್ಲಿರಬೇಕು.
ತುರ್ತು ಸಂಪರ್ಕ:
ತಾಲೂಕು ಕಚೇರಿ: 📞 08256-232047






