ನೆಲ್ಯಾಡಿ: ಉಡುಪಿಯ ತಾಲೂಕು ಪಂಚಾಯತ್ ಮಾಜಿ ಸದಸ್ಯೆ, ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂಬ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೆಲ್ಯಾಡಿಯ ಉಷಾ ಅಂಚನ್ ರವರು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ.

ಈ ನೇಮಕಾತಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷರು ಮತ್ತು ರಾಜ್ಯ ಮಹಿಳಾ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರ ಶಿಫಾರಸಿನ ಮೇರೆಗೆ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರ ಸಿಫಾರಸ್ಸಿನ ಮೂಲಕ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಲಾ ಲಂಬಾ ರವರು ಈ ನೇಮಕ ಮಾಡಿದ್ದಾರೆ

ಕುಂಡಡ್ಕ ನಿವಾಸಿಯಾಗಿರುವ ಉಷಾ ಅಂಚನ್ ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಸಹಕಾರಿ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿಯೂ ಶ್ರಮಿಸಿ ಹಲವಾರು ಹುದ್ದೆಗಳನ್ನು ಭರಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!