
ಒಡಿಯೂರು ಶ್ರೀಗಳ ಜನ್ಮದಿನೋತ್ಸವ-ಗ್ರಾಮೋತ್ಸವ-ಸೇವಾ ಸಂಭ್ರಮ -2025 ಸಲುವಾಗಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಉಬಾರ್ ವಲಯದ ಆಶ್ರಯದಲ್ಲಿ ನೇತ್ರಾವತಿ ಆಟೋ ಚಾಲಕರ ಮತ್ತು ಮಾಲಕರ ಸಂಘ ಉಪ್ಪಿನಂಗಡಿ ಬ್ಲಡ್ ಡೋನರ್ಸ್ ಮಂಗಳೂರು ರಿ ಇದರ ಸಂಯುಕ್ತ ಆಶ್ರಯದಲ್ಲಿ ಎ.ಬಿ. ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ, ನಿಟ್ಟೆ ವಿಶ್ವವಿದ್ಯಾಲಯ, ಮಂಗಳೂರು ಇದರ ಸಹಬಾಗಿತ್ವದೊಂದಿದೆ ರಕ್ತದಾನ ಶಿಬಿರ ಹಾಗೂ ಉಚಿತ ದಂತ ಚಿಕಿತ್ಸಾ ಶಿಬಿರ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಯಿತು.
ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿರುವ ಮಾತೇಶ್ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನೇತ್ರಾವತಿ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಫಾರೂಕ್ ಝಿಂದಗಿ, ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಉಪಾಧ್ಯಕ್ಷರಾಗಿರುವ ಅಶ್ರಫ್ ಸಿ ಎಂ ಉಪ್ಪಿನಂಗಡಿ, ಕಾರ್ಯನಿರ್ವಾಹಕರಾದ ಸಾದಿಕ್ ಗೊಳಿತೊಟ್ಟು, ಇಕ್ಬಾಲ್ ಕೋಲ್ಪೆ ಉಪಸ್ಥಿತರಿದ್ದರು.ಜಯಪ್ರಕಾಶ್ ಸ್ವಾಗತಿಸಿ ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರೂಪಿಸಿದರು.






