
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಹಾಗೂ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ ಆರೋಪದ ಹಿನ್ನೆಲೆಯಲ್ಲಿ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ. ರಾವ್ ಮನೆಯಲ್ಲಿ ಜುಲೈ 28 ರಂದು ಸಂಜೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದರು.
ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಈ ಮಹಜರು ನಡೆಯಿತು. ಪ್ರಕರಣದ ಕುರಿತು ಯುವತಿ ನೀಡಿದ ದೂರು ಪ್ರಕಾರ, ಆರೋಪಿಯು ಮದುವೆಯಾಗುವುದಾಗಿ ಭರವಸೆ ನೀಡಿದ ನಂತರ ಬಪ್ಪಳಿಗೆಯ ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಯಿಸಿ ದೈಹಿಕ ಸಂಬಂಧ ಬೆಳೆಸಿದ್ದ ಎಂದು ತಿಳಿದು ಬಂದಿದೆ.
ಮಹಜರಿನಲ್ಲಿ ಸಂತ್ರಸ್ತೆ, ಆಕೆಯ ಮಗು ಹಾಗೂ ತಾಯಿ, ಆರೋಪಿಯ ಸಹೋದರಿ, ಓರ್ವ ಸಾಕ್ಷಿದಾರ ಮತ್ತು ವಕೀಲೆ ಶೈಲಜಾ ಅಮರನಾಥ್ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.






