ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಆಗಸ್ಟ್ 2ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ‘ಫಿಲೋ ಆಟಿದ ಕೂಟ’ ಎಂಬ ಶೀರ್ಷಿಕೆಯೊಂದಿಗೆ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದು, ‘ನವರಸರಾಜ’ ಖ್ಯಾತಿಯ ಕಲಾವಿದ ಭೋಜರಾಜ್ ವಾಮಂಜೂರು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಪುತ್ತೂರು ಮಾಯಿ ದೆ ದೇವುಸ್ ಚರ್ಚ್‌ನ ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟಾ ಹಾಗೂ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಅವರು ಗೌರವ ಉಪಸ್ಥಿತಿಯನ್ನು ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ‘ಕಲಾ ಸವ್ಯಸಾಚಿ’ ಪ್ರಶಾಂತ್ ಸಿ.ಕೆ ಹಾಗೂ ‘ಹಾಸ್ಯದರಸು’ ಸುಂದರ ಬಂಗಾಡಿ ಅವರಿಂದ ‘ಕುಸಾಲ್ದ ರಸ’ ಹಾಸ್ಯ-ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!