ಮಂಗಳೂರು: ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಿದ ವಿಶ್ವಕರ್ಮ ಸಮುದಾಯದ ಯುವತಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ವಿಶ್ವಕರ್ಮ ಅವರು ಆಗಸ್ಟ್ 1ರಂದು ಪುತ್ತೂರು ಮತ್ತು ಮಂಗಳೂರು ನಗರಗಳಿಗೆ ಭೇಟಿ ನೀಡಲಿದ್ದಾರೆ.

ಈ ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ನ್ಯಾಯ ಒದಗಿಸಬೇಕೆಂಬ ಉದ್ದೇಶದಿಂದ, ಅವರು ಹಿಂದುತ್ವ ಪರ ನಾಯಕರಾದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಭೇಟಿಯಾಗಿ ಪ್ರಕರಣದ ಕುರಿತು ಮನವಿ ಸಲ್ಲಿಸುವರು ಎಂದು ಮಹಾಸಭಾ ಪ್ರಕಟಣೆಯಲ್ಲಿ ತಿಳಿಸಿದೆ.

ಸಮುದಾಯದ ಗೌರವವನ್ನು ಕಾಪಾಡುವ ಜೊತೆಗೆ ಸಂತ್ರಸ್ತೆಗೆ ನ್ಯಾಯ ದೊರಕಿಸುವುದೇ ಮಹತ್ವದ ಉದ್ದೇಶವಾಗಿದೆ ಎಂದು ಮಹಾಸಭಾ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!