ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಕೆ.ಆ‌ರ್. ನಗರ ಮೂಲದ ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ನಾಳೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.

ಇಂದು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದು, ನಾಳೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದ್ದಾರೆ.ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಹಾಜರಿದ್ದ ಆರೋಪಿ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕುತ್ತಾ ನ್ಯಾಯಾಲಯದಿಂದ ತೆರಳಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಇನ್ನೂ ನಾಲ್ಕು ಪ್ರಕರಣಗಳ ವಿಚಾರಣೆ ಬಾಕಿ ಇದ್ದು, ಕಳೆದ 14 ತಿಂಗಳುಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!