
ಪುತ್ತೂರು:ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪ.ಕ್ರ. 35/2001 ಕಲಂ 379, 34 ಭಾ.ದಂ.ಸಂ ಅಡಿಯಲ್ಲಿ ಆರೋಪಿತನಾಗಿ 2018 ರಲ್ಲಿ ಜಾಮೀನು ಪಡೆದು ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಮ್ಮದ್ ಹನೀಫ್ (55) ಎಂಬಾತನನ್ನು ಪೊಲೀಸರು ಕೊನೆಗೂ ವಶಕ್ಕೆ ಪಡೆದುಕೊಂಡಿದ್ದಾರೆ.
ಮಡಿಕೇರಿ ಜಿಲ್ಲೆಯ ಸೋಮವಾರಪೇಟೆಯ ನಿವಾಸಿಯಾದ ಹನೀಫ್, ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪತ್ತೆಯಾಗಿದ್ದು, ಪುತ್ತೂರು ಪೊಲೀಸರು ನಿಟ್ಟಾದ ಕಾರ್ಯಾಚರಣೆ ಮೂಲಕ ಆತನನ್ನು ಬಂಧಿಸಿದ್ದಾರೆ.
ನ್ಯಾಯಾಲಯದ ಆದೇಶ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 269 ಬಿ.ಎನ್.ಎಸ್ ಅಡಿಯಲ್ಲಿ ಮತ್ತೊಂದು ಪ್ರಕರಣವೂ ದಾಖಲಿಸಲಾಗಿದೆ. ಬಳಿಕ ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.






