
ಪುತ್ತೂರು:ಕೌಡಿಚ್ಚಾರ್-ಮೈಂದನಡ್ಕ ರಸ್ತೆಯ ಪಾಪೆಮಜಲು ಬಳಿ ರಿಕ್ಷಾ ಡಿಕ್ಕಿಗೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು ಮೃತಪಟ್ಟ ದುರ್ಘಟನೆ ಆ. 1 ರಂದು ರಾತ್ರಿ ನಡೆದಿದೆ. ಪಾಪೆಮಜಲು ನಿವಾಸಿ ಸುಭಾಷ್ ಕುಲಾಲ್ (55) ಮೃತರು.
ಕೌಡಿಚ್ಚಾರ್‌ನಲ್ಲಿ ಹೋಟೆಲ್ ನಡೆಸುತ್ತಿದ್ದ ಅವರು, ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಆಟೋರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಮತ್ತೊಂದು ವೇಗದ ರಿಕ್ಷಾ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗಳಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮೃತರು ಪತ್ನಿ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.






